ಎಎನ್‌ಎಫ್ ಎಸ್ಪಿಯಾಗಿ ಮಾರ್ಟಿನ್

sp
Published on

ಉಡುಪಿ: ನಕ್ಸಲ್ ನಿಗ್ರಹ ದಳ (ಎಎನ್‌ಎಫ್) ನೂತನ ವರಿಷ್ಠಾಧಿಕಾರಿಯಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅವರು ಕಲಬುರಗಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಹಿಂದೆ ಸಿಐಡಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1300 ಪುಟಗಳ ದೋಷಾರೋಪ ಪಟ್ಟಿಯನ್ನು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಕಾರ್ಕಳ ಕೇಂದ್ರ ಘಟಕ ಹೊಂದಿರುವ ನಕ್ಸಲ್ ನಿಗ್ರಹ ದಳದಲ್ಲಿ 4 ತಿಂಗಳಿನಿಂದ ಎಎನ್‌ಎಫ್ ಘಟಕದ ವರಿಷ್ಠಾಧಿಕಾರಿ ಹುದ್ದೆ ಖಾಲಿ ಇದ್ದು, ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಭಾರ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net