ಅಂಗನವಾಡಿ ಕಾರ್ಯಕರ್ತೆಯರಿಗೆ ‘ಸೇವಾರತ್ನ’ ಪ್ರಶಸ್ತಿ ಪ್ರದಾನ

anganavadi
Published on

ಮಡಿಕೇರಿ:

ರೋಟರಿ ವುಡ್ಸ್ ವತಿಯಿಂದ 11 ಅಂಗನವಾಡಿ ಕಾರ್ಯಕರ್ತೆಯರಿಗೆ ಈಚೆಗೆ ‘ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ.ಆರ್. ಅನಿಲಾ, ಹೊಸ್ಕೇರಿ ಬೆಟ್ಟ ಅಂಗನವಾಡಿ ಕಾರ್ಯಕರ್ತೆ ಪಿ.ಎಸ್. ಲತಾ, ಬಾಡಗ-1 ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ, ಹೊಸ ಬಡಾವಣೆ ಅಂಗನವಾಡಿ ಕೇಂದ್ರದ ಕೆ.ಎಸ್. ಮುತ್ತಮ್ಮ, ಕಾಲೇಜು ಹಿಂಭಾಗ ಅಂಗನವಾಡಿ ಕಾರ್ಯಕರ್ತೆ ಆರ್. ನೀತು, ಹೆಬ್ಬಟ್ಟಗೇರಿ ಅಂಗನವಾಡಿ ಕಾರ್ಯಕರ್ತೆ ಕೆ.ಬಿ. ಧರಣಿ, ನಾರಾಯಣ ಪಾಟಿ ಅಂಗನವಾಡಿ ಕಾರ್ಯಕರ್ತೆ ಎನ್.ಎಸ್. ನೀಲಮ್ಮ, ಚೆಟ್ಟಿಮಾನಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಶಶಿ, ಕಬಡಕೇರಿ ಅಂಗನವಾಡಿ ಕಾರ್ಯಕರ್ತೆ ಎಂ.ಇ. ತಂಸೀನಾ ಭಾನು, ಹಳೆ ತಾಲೂಕು ಅಂಗನವಾಡಿ ಕಾರ್ಯಕರ್ತೆ ಸಿ.ಜೆ. ಭಾಗ್ಯವತಿ ಹಾಗೂ ಗೌಳಿಬೀದಿ ಅಂಗನವಾಡಿ ಕಾರ್ಯಕರ್ತೆ ಎನ್.ಎ. ಗೀತಾ ಅವರು ಪ್ರಶಸ್ತಿಗೆ ಭಾಜನರಾದರು.

ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಮೇಲ್ವಿಚಾರಕರಾಗಿ, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೇಪಾಡಂಡ ಸವಿತಾ ಕೀರ್ತನ್ ಅವರಿಗೂ ರೋಟರಿಯ ಪ್ರತಿಷ್ಠಿತ ‘ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕೇಂದ್ರಗಳನ್ನು ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿ ಮಾಡುವ ನಿಟ್ಟಿನಲ್ಲಿ ರೋಟರಿ ವುಡ್ಸ್ನವರ ಕೊಡುಗೆ ಅಪಾರ ಎಂದರು.

ಕ್ಲಬ್‌ನ ವಾರದ ಸಭೆಯ ಜತೆಗೆ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ, ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಅಸಿಸ್ಟೆಂಟ್ ಗವರ್ನರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾ ಪೂವಯ್ಯ, ವುಡ್ಸ್ ಕಾರ್ಯದರ್ಶಿ ಕಿರಣ್ ಕುಂದರ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net