ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಕೆ-ಡಿಸಿ

DC Gangubayi mankar
Published on

ಕಾರವಾರ:ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರ ಕೆಲವೊಂದು ಬೇಡಿಕೆಗಳು ಸರ್ಕಾರದ ಹಂತದಲ್ಲಿ ತಿರ್ಮಾನ ತೆಗೆದುಕೊಳ್ಳಬೇಕಾಗಿರುವುದರಿಂದ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

ಅಂಗನವಾಡಿಗಳಿಗೆ ನರೇಗಾ ಯೋಜನೆಯಡಿ ಕುಡಿಯುವ ನೀರು, ಶೌಚಗೃಹ ಮತ್ತು ಕಂಪೌಂಡ್ ನಿರ್ಮಿಸಲು ಅವಕಾಶವಿದೆ. ಮೂಲ ಸೌಕರ್ಯ ಇಲ್ಲದ ಅಂಗನವಾಡಿಗಳ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂಗನವಾಡಿಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಒದಗಿಸಬೇಕು.
ಹಾಗೂ ಅವಧಿ ಮುಗಿದ ಪದಾರ್ಥಗಳನ್ನು ಬಳಸದಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಅಂಗನವಾಡಿ ನಿರ್ವಹಣೆಗಾಗಿ ನೀಡಲಾಗುವ ಹಿಂದಿನ ಸಾದಿಲ್ವಾರು ಮತ್ತು ಪ್ಲೆಕ್ಸಿ ಫಂಡ್ನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಪಾವತಿಸುಂತೆ ಅಧಿಕಾರಿಗಳಿಗೆ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಯಮುನಾ ಗಾಂವ್ಕರ್ ಮಾತನಾಡಿ ಎಲ್ಲ ತಾಲ್ಲೂಕುಗಳ ಅಂಗನವಾಡಿಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಮಾಹಿತಿ ನೀಡಿ, ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಹೆಚ್.ಹೆಚ್. ಕುಕನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net