ವಿವಿಧ ಬೇಡಿಕೆ ಈಡೇರಿಸಲು ಪಟ್ಟು

anganavadi workers protest
Published on

ದೊಡ್ಡಬಳ್ಳಾಪುರದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಪ್ರತಿಭಟನೆ


ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಘಟಕದಿಂದ ಸಿಡಿಪಿಒ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಇಎಸ್‌ಐ, ಪಿಎಫ್, ಪಿಂಚಣಿ ಹಾಗೂ ಇತರ ಸೌಲಭ್ಯ ಕಲ್ಪಿಸಬೇಕು. 45 ಮತ್ತು 46ನೇ ಇಂಡಿಯನ್ ಲೇಬರ್ ಕಾನ್ಫರೆನ್ಸ್ ಶಿಫಾರಸು ಜಾರಿ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕೊಡುವ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ ಮಾತನಾಡಿ, ಇಂದ್ರಧನುಷ್, ಗುರುಡಾ ಆ್ಯಪ್ ಮೂಲಕ ಹಲವು ಸಮೀಕ್ಷೆ ನಡೆಸಬೇಕು. ಆದರೆ, ಸರ್ಕಾರ ನೀಡಿರುವ ಸ್ಮಾರ್ಟ್‌ಫೋನ್ ಹಳೆಯ ಮಾದರಿಯಾಗಿದ್ದು, ವೇಗವಾಗಿ ಕೆಲಸ ಮಾಡುತ್ತಿಲ್ಲ. ಇದರಿಂದ ಸಮಸ್ಯೆಯಾಗಿದೆ. ಕೂಡಲೇಹೊಸ ಫೋನ್ ವಿತರಿಸಬೇಕು ಎಂದರು.
ಗೌರವಧನ ವಿತರಣೆ ವಿಳಂಬ ಮಾಡಬಾರದು. ಕೆಲವೆಡೆ ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಇದ್ದು, ಸಹಾಯಕಿಯರಿಲ್ಲ. ಶೀಘ್ರವೇ ನೇಮಕಾತಿ ಮಾಡಬೇಕು. ಮೊಟ್ಟೆ, ತರಕಾರಿ ಖರೀದಿಗೆ ನೀಡುತ್ತಿರುವ ಹಣ ಸಾಕಾಗುತ್ತಿಲ್ಲ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net