

ಹಾವೇರಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 36 ಅಂಗನವಾಡಿ ಕಾರ್ಯಕರ್ತೆ ಮತ್ತು 132 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು.
ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 14 ರೊಳಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.