ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ವಹಿಸಲು ರಾಜ್ಯ ಅಂಗನವಾಡಿ ನೌಕರರ ಜಿಲ್ಲಾ ಸಮಿತಿ ಒತ್ತಾಯ

150420 Raichur Anganawadi Employees Committee Appeal
Published on

ರಾಯಚೂರು : ಕರೊನಾ ಜಾಗೃತಿ ಕೆಲಸದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ, ವಿಮಾ ವ್ಯಾಪ್ತಿಗೆ ಸೇರಿಸಲು ರಾಜ್ಯ ಅಂಗನವಾಡಿ ನೌಕರರ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ನಗರದ ಡಿಸಿ ಕಚೇರಿಯ ಸ್ಥಾನಿಕ ಅಧಿಕಾರಿ ಪ್ರಭಾವತಿ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಳಿ ತಾಂಡಾದಲ್ಲಿ ಕರೊನಾ ವೈರಸ್ ಹಿನ್ನೆಲೆ ಗುಂಪು ಗುಂಪಾಗಿ ಸೇರಿದ ಜನರಿಗೆ ಗುಂಪು ಸೇರಿದಂತೆ ಮತ್ತು ಮುಖಕ್ಕೆ ಮಾಸ್ಕ್ ಉಪಯೋಗಿಸುವಂತೆ ಜಾಗೃತಿ ಮೂಡಿಸುವಾಗ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಮೇಲೆ ಕೆಲ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಕರೊನಾ ಸೋಂಕು, ಆರೋಗ್ಯದ ಬಗ್ಗೆ ಎಚ್ಚರಿಕೆ ಮೂಡಿಸುತ್ತಿರುವ ಎಲ್ಲ ನೌಕರರಿಗೆ ಸರ್ಕಾರ ಸೂಕ್ತ ರಕ್ಷಣೆ ಕೂಡಬೆಕು. ಅಂಗನವಾಡಿ ಕಾರ್ಯಕರ್ತೆಯಾರನ್ನೂ ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ಸೇರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಮಿತಿ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಸಹ ಕಾರ್ಯದರ್ಶಿ ಗೋಕಾರಮ್ಮ, ಆದಿಲಕ್ಷ್ಮಿಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net