ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಆರಂಭಿಸಲು ಒತ್ತಾಯ

210920 Gangavati AITUC Protest
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಆರಂಭಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ತಾಲೂಕು ಸಮಿತಿ ಸದಸ್ಯರು ಗಂಗಾವತಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Published on

ಗಂಗಾವತಿ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಆರಂಭಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಎಐಟಿಯುಸಿ ಸಹಯೋಗದೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್ ವಿ.ಎಚ್.ಹೊರಪೇಟಿಗೆ ಮನವಿ ಸಲ್ಲಿಸಿದರು.

ಎಐಟಿಯುಸಿ ಜಿಲ್ಲಾ ಸಂಚಾಲಕ ಎ.ಎಲ್.ತಿಮ್ಮಣ್ಣ ಮಾತನಾಡಿ, ಅಂಗನವಾಡಿ ಕೇಂದ್ರಗಳನ್ನು ಬಲಗೊಳಿಸಬೇಕಿದ್ದು, ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಆರಂಭ ಕೈಬಿಟ್ಟು ಅಂಗನವಾಡಿಯಲ್ಲಿ ಚಾಲನೆ ನೀಡಬೇಕು. ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ಜತೆಗೆ ಅಗತ್ಯ ಪಠ್ಯಪುಸ್ತಕ ಮತ್ತು ಸಮವಸಗಳ ವಿತರಣೆಯಾಗಬೇಕಿದೆ.ಪ್ರಾಥಮಿಕ ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಅಂಗನವಾಡಿಯಿಂದ ವರ್ಗಾವಣೆ ಪತ್ರ ಕಡ್ಡಾಯಗೊಳಿಸಬೇಕಿದೆ. ಅಧಿವೇಶನದಲ್ಲಿ ಚರ್ಚಿಸಬೇಕಿದ್ದು, ನಿರ್ಲಕ್ಷಿಸಿದರೆ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಪದಾಧಿಕಾರಿಗಳಾದ ಎ.ಹುಲುಗಪ್ಪ, ಲಕ್ಕಮ್ಮ, ಭಾರತಿ, ಶಿವಮ್ಮ ಹುಡೇದ್, ಅನ್ನಪೂರ್ಣ, ಜಯಮ್ಮ, ಹೊನ್ನಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net