ಅಂಗನವಾಡಿ ಕೇಂದ್ರಕ್ಕೆ ಕಾಯಕಲ್ಪ ಕಲ್ಪಿಸಲು ಕ್ರಮ

ಅಂಗನವಾಡಿ ಕೇಂದ್ರಕ್ಕೆ ಕಾಯಕಲ್ಪ ಕಲ್ಪಿಸಲು ಕ್ರಮ
Published on

ಗುಂಡ್ಲುಪೇಟೆ: ತಾಲೂಕಿನಲ್ಲಿ ಶಿಥಿಲವಾಗುತ್ತಿರುವ ಅಂಗನವಾಡಿ ಕೇಂದ್ರಗಳನ್ನು ರಿಪೇರಿ ಮಾಡಲು ಕ್ರಮಕೈಗೊಳ್ಳಲಾಗುವುದು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಸೋಮವಾರ ತಾಲೂಕಿನ ಅರೇಪುರ ಗ್ರಾಮದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಎಲ್ಲ ರೀತಿಯ ನೆರವನ್ನು ನೀಡುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಮಾರ್ಟ್ ಸ್ಕೂಲ್ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಅಂಗನವಾಡಿ ಕಟ್ಟಡಗಳ ರಿಪೇರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕ್ಷೇತ್ರದ 145 ಅಂಗನವಾಡಿ ಕೇಂದ್ರಗಳಿಗೆ ಟಿವಿ ನೀಡಲಾಗುತ್ತಿದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಮಕ್ಕಳ ಕಲಿಕೆಗೆ ಅಗತ್ಯವಾದ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಚಿಕ್ಕಾಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವಕುಮಾರ್, ಮಾಜಿ ಅಧ್ಯಕ್ಷೆ ಚೈತ್ರಾ, ಶಿಶು ಅಭಿವೃದ್ದಿ ಅಧಿಕಾರಿ ಹೇಮಾವತಿ, ವೆಂಕಟನಾಯ್ಕ, ಗೌಡರ ಶಂಕರಪ್ಪ, ಮಲ್ಲಿಕಾರ್ಜುನ, ನಂದೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net