ಜಿಲ್ಲೆಯಲ್ಲಿ ಅಂಗನವಾಡಿಗೆ ಮರಳಿದ ಚಿಣ್ಣರು: ಸಿಹಿ ತಿನ್ನಿಸಿ ಸ್ವಾಗತ ಕೋರಿದ ಜಿಪಂ ಸಿಇಒ

Anganwadi center reopened in the district Mandya
Published on

ಮಂಡ್ಯ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು ಪುನರಾರಂಭಗೊಂಡವು. ಅಂತೆಯೇ ಚಿಣ್ಣರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸಿಹಿ ತಿನ್ನಿಸಿ ಸ್ವಾಗತ ಕೋರಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಆರಂಭಿಸಲಾಯಿತು. ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ತೆರಳಿದರು.

ತಾಲೂಕಿನ ಎಂ.ಜಿ.ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭಹಾರೈಸಿದರು. ಅಂಗನವಾಡಿಗೆ ಬಂದ ಮಕ್ಕಳಿಗೆ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ. ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಬೇಸಿಗೆ ರಜೆಯ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ಧಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ. ಪೌಷ್ಟಿಕಾಂಶ ಆಹಾರದ ಜತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಇನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ತಾಲೂಕಿನ ಹೊಸ ಬೂದನೂರು, ನಗರದ ಶಂಕರಮಠ, ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂವು, ಸಿಹಿ ವಿತರಿಸಿ ಆತ್ಮೀಯವಾಗಿ ಮಕ್ಕಳನ್ನು ಅಂಗನವಾಡಿಗೆ ಬರಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net