

ಸತೀಶ್ ಚಿಕ್ಕಕಣಗಾಲು ಆಲೂರು
ಪುಟ್ಟ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣದ ಜ್ಞಾನ ಉಣಬಡಿಸುವ ಸದುದ್ದೇಶದಿಂದ ತಾಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯಗಳಿಲ್ಲದೆ ಪಾಲಕರು ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ.
ತಾಲೂಕಿನಲ್ಲಿ ಒಟ್ಟು 179 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 138 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡವನ್ನು ಹೊಂದಿದ್ದರೆ, ಉಳಿದ ಕೇಂದ್ರಗಳು ಸಮುದಾಯ ಭವನ, ಸರ್ಕಾರಿ ಶಾಲಾ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. 0-6 ವರ್ಷದೊಳಗಿನ 1169 ಗಂಡು, 1158 ಹೆಣ್ಣು ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ಕಲಿಯುತ್ತಿದ್ದಾರೆ. ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಶೌಚಗೃಹ, ಕುಡಿಯವ ನೀರಿನ ವ್ಯವಸ್ಥೆ ಇಲ್ಲದೆ ಸಮಸ್ಯೆಗಳ ನಡುವೆ ಮಕ್ಕಳು ಕಲಿಯಬೇಕಾಗಿದೆ. ಕೆಲವೆಡೆ ವಿದ್ಯುತ್ ಸಮಸ್ಯೆ ಕೂಡ ಇದೆ.
ಕೆಲವು ಅಂಗನವಾಡಿ ಕೇಂದ್ರಗಳು ಶಿಥಿಲಗೊಂಡಿದ್ದು, ಮಕ್ಕಳನ್ನು ಕೇಂದ್ರಗಳಿಗೆ ಕಳುಹಿಸಲು ಭಯ ಪಡುವ ಪರಿಸ್ಥಿತಿ ಇದೆ. ಅಲ್ಲದೆ 179 ಅಂಗನವಾಡಿ ಕೇಂದ್ರಗಳ ಪೈಕಿ, 172 ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿದ್ದಾರೆ ಹಾಗೂ 129 ಜನ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಸರ್ಕಾರ ಶಿಶುಮಕ್ಕಳ, ಗರ್ಭಿಣಿಯರ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವುದರ ಜತೆಗೆ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಜವಾಬ್ದಾರಿ ನೀಡಿದೆ. ಇವೆಲ್ಲದರ ನಡುವೆ ಅಂಗನವಾಡಿಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ತಾಲೂಕಿನ ಕುಂದೂರು ಹಾಗೂ ಕೆ.ಹೊಸಕೋಟೆ ಹೋಬಳಿ ಹೆಚ್ಚು ಮಳೆ ಸುರಿಯುವ ಪ್ರದೇಶವಾಗಿದ್ದು, ಈ ಭಾಗದ ಸಾಕಷ್ಟು ಅಂಗನವಾಡಿ ಕಟ್ಟಡಗಳು ದುರಸ್ತಿಗೆ ಬಂದಿವೆ. ಈ ಭಾಗದ 23 ಕಟ್ಟಡಗಳು ಸಂಪೂರ್ಣವಾಗಿ ಹಾಳಾಗಿದ್ದು, ನಿರ್ಮಾಣ ಹಂತದಲ್ಲಿರುವ 12 ಕಟ್ಟಗಳು ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿವೆ.
ಮಕ್ಕಳು, ಗರ್ಭಿಣಿ, ಬಾಣಂತಿಯರ ಕಾಳಜಿ
ಅಂಗನವಾಡಿ ಕಾರ್ಯಕರ್ತೆಯರು ಕೇವಲ ಮಕ್ಕಳ ಪಾಲನೆ ಮಾಡುವುದಲ್ಲದೆ, ಗರ್ಭಿಣಿ, ಬಾಣಂತಿಯರಿಗೆ ಸರ್ಕಾರದ ಸೌಲಭ್ಯಗಳ ಒದಗಿಸುವುದು ಸೇರಿದಂತೆ ಇನ್ನಿತರ ಕೆಲಸ, ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಆದರೆ, ನಿರೀಕ್ಷಿತ ವೇತನ ಇಲ್ಲದೆ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನಲ್ಲಿ 385 ಗರ್ಭಿಣಿಯರು, 411 ಬಾಣಂತಿಯರು ಇದ್ದಾರೆ. ಅವರಿಗೆ ಪೌಷ್ಟಿಕ ಆಹಾರಗಳಾದ ಅಕ್ಕಿ, ನುಚ್ಚು, ಕಾಳು, ಹಾಲಿನ ಪೌಡರ್, ಸಕ್ಕರೆ ಅಡುಗೆ ಎಣ್ಣೆ, ಮೊಟ್ಟೆಗಳನ್ನು ನೀಡಲಾಗುತ್ತಿದೆ. 0-6 ವರ್ಷದೊಳಗಿನ ಮಕ್ಕಳಿಗೆ ವಾರಕ್ಕೆ 2 ಮೊಟ್ಟೆಗಳನ್ನು ನೀಡಲಾಗುತ್ತಿದ್ದು, ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ವಾರದಲ್ಲಿ 5 ಮೊಟ್ಟೆಗಳನ್ನು ನೀಡಲಾಗುತ್ತದೆ. 400 ಜನರಿಗೆ ಒಂದು ಅಂಗನವಾಡಿ ಸ್ಥಾಪಿಸುವ ಅವಕಾಶವಿದ್ದು, ತಾಲೂಕಿನಲ್ಲಿ 24 ಮಿನಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ 11 ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ.ದಾಯದ ಭವನದಲ್ಲಿ ನಡೆಯುತ್ತಿರುವ ಅಂಗನವಾಡಿ