ಅಂಗನವಾಡಿ ನೌಕರರಿಗೆ ವೇತನ ವಿಳಂಬಕ್ಕೆ ಆಕ್ರೋಶ

udp-19-anganavadi
Published on

ಉಡುಪಿ: ಎಲ್ಲಾ ಇಲಾಖೆ ಸಿಬ್ಬಂದಿಗೆ ಸೂಕ್ತ ಸಮಯಕ್ಕೆ ಸಂಬಳವಾಗುತ್ತಿದ್ದು, ಅಂಗನವಾಡಿ ನೌಕರರಿಗೆ ಗೌರವಧನ ನೀಡಲು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಮೂರ್ನಾಲ್ಕು ತಿಂಗಳಿಗೊಮ್ಮೆ ಸಂಬಳ ನೀಡುತ್ತಿದೆ. ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಗೌರವಧನ ನೀಡದಿದ್ದರೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್​ ಎಚ್ಚರಿಕೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಅಂಗನವಾಡಿ ನೌಕರರನ್ನು ಸರ್ಕಾರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸದೆ ಕೇವಲ ದುಡಿಮೆಗಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 6ನೇ ಗ್ಯಾರಂಟಿ ಯೋಜನೆಯಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ., ಸಹಾಯಕಿಯರಿಗೆ 10 ಸಾವಿರ ರೂ.ಗೌರವಧನ ಹೆಚ್ಚಿಸಬೇಕು. 2023ರ ಎ. 1ರಿಂದ ನಿವೃತ್ತಿಯಾದವರಿಗೆ ಗ್ಯಾಜುವಿಟಿ ಹಣವನ್ನು ತತ್​ಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂದ ಕಾರ್ಯದರ್ಶಿ ಬೇಬಿ ಶೆಟ್ಟಿ, ಕೋಶಾಧಿಕಾರಿ ಪದ್ಮಾವತಿ ಅಮೀನ್​, ಕಾರ್ಕಳ ತಾಲೂಕು ಅಧ್ಯೆ ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಮಮತಾದೇವಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net