ಬೆಳಗಾವಿ: ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯಾಗುವ ಅವಕಾಶ

anganawadi jpg
Published on

ಬೆಳಗಾವಿ: ಜಿಲ್ಲೆಯ 12 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಗ್ರಾಮಗಳು / ನಗರ ಪ್ರದೇಶಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲಿಚ್ಛಿಸುವ ಮಹಿಳಾ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ಅರ್ಹ ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋ ಸಡಿಲಿಕೆ ಇರುತ್ತದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 5 ರೊಳಗಾಗಿ anganwadirecruit.kar.nic.in ಮೂಲಕ ಆನ್​ಲೈನ್ ಅರ್ಜಿ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net