

ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 7 ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಪೂರೈಸಿರಬೇಕು. ಅಂಗವಿಕಲ ಅಭ್ಯರ್ಥಿಗಳು (ಕಾರ್ಯಕರ್ತೆ ಹುದ್ದೆಗೆ ಮಾತ್ರ) 45 ವರ್ಷದೊಳಗಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 23ರೊಳಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬೇಕು. https://anganwadirecruit.kar.nic.in ವೆಬ್ಸೈಟ್ ನೋಡಬಹುದು.