

ಸಿಂಧನೂರು: ತಾಲೂಕಿನ ಕಲಮಂಗಿ ಗ್ರಾಮದ ಅಂಗನವಾಡಿ ಕೇಂದ್ರ 1ರಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಕೇಂದ್ರ-3ರಲ್ಲಿ ಸಹಾಯಕಿ ಹುದ್ದೆ ಖಾಲಿ ಇದ್ದು ಕೂಡಲೇ ಭರ್ತಿಗೊಳಿಸಬೇಕೆಂದು ಒತ್ತಾಯಿಸಿ ತುರ್ವಿಹಾಳ ವಿಭಾಗದ ಸಿಡಿಪಿಒ ಅಶೋಕ ಅವರಿಗೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ಮನವಿ ಸಲ್ಲಿಸಿತು. ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಅಂಗನವಾಡಿ ಕೇಂದ್ರಗಳನ್ನು ನಿರ್ವಹಿಸುತ್ತಿದೆ. ಆದರೆ, ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕ ಸೌಲಭ್ಯ ನೀಡುತ್ತಿಲ್ಲ ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ. ಕೂಡಲೇ ಹುದ್ದೆಗಳನ್ನು ಭರ್ತಿಗೊಳಿಸಿ, ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.