ಸಚಿವರಾಗಿ ಮಂಗಳೂರಿಗೆ ಆಗಮಿಸಿದ ಅಂಗಾರ

angara new
Published on

ಮಂಗಳೂರು: ರಾಜ್ಯ ಸರ್ಕಾರದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಎಸ್.ಅಂಗಾರ ಶುಕ್ರವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.

ಸಚಿವರಾದ ಬಳಿಕ ಅಂಗಾರ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ್ದು, ಬಂಟ್ವಾಳ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಸಚಿವ ವಿ.ಸೋಮಣ್ಣ ಅಂಗಾರರ ಜತೆ ಇದ್ದರು.

ಮೇಯರ್ ದಿವಾಕರ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ವೈ.ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್ ಹಾಗೂ ರಾಜೇಶ್ ನಾಕ್, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಸಂತೋಷ್ ಶೆಟ್ಟಿ ಬೋಳಿಯಾರ್, ನಿತಿನ್ ಕುಮಾರ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಅಂಗಾರ ಅವರು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net