

34 ಕೇಂದ್ರಗಳಲ್ಲಿ ಕಾಮಗಾರಿ ಬಾಕಿ:
ಪ್ರಸ್ತುತ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಅಳವಡಿಕೆ ಮೂಲಕ ನೀರಿನ ಸೌಲಭ್ಯ ಕಲ್ಪಿಸುವ ಯೋಜನೆ ಭರದಿಂದ ಸಾಗಿದ್ದು, ಜಿಲ್ಲೆಯಲ್ಲಿ ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 984 ಅಂಗನವಾಡಿಗಳ ಪೈಕಿ 34 ಅಂಗನವಾಡಿಗಳಲ್ಲಿ ಕಾಮಗಾರಿ ಬಾಕಿ ಉಳಿದಿದ್ದು ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್‌ಒ ಪ್ಲಾಂಟ್‌ಗಳಿಂದ ನೀರು ಜಲಜೀವನ್ ಮಿಷನ್ ಯೋಜನೆಯಡಿ ನೀರು ಸರಬರಾಜು ಆಗುತ್ತಿದ್ದರೂ ಇದು ಕೇವಲ ಬಳಕೆಗೋ ಅಥವಾ ಕುಡಿಯಲೂ ಬಳಸಬಹುದಾ ಎಂಬ ಗೊಂದಲವಿದೆ. ಆದ್ದರಿಂದ ಪ್ರಸ್ತುತ ಅಂಗನವಾಡಿಗಳಿಗೆ ಸ್ಥಳೀಯವಾಗಿ ಶುದ್ಧ ಕುಡಿವ ನೀರಿನ ಘಟಕಗಳ ಮೂಲಕ ಉಚಿತವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿನ ನೀರಿನ ಘಟಕಗಳ ಮೂಲಕ ನೀರು ತರಿಸಲಾಗುತ್ತಿದೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಸ್ಥಳೀಯವಾಗಿರುವ ಘಟಕಗಳ ಮೂಲಕ ಕುಡಿವ ನೀರಿನ ಕೊರತೆ ಸರಿದೂಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಿಎಸ್‌ಆರ್ ಅನುದಾನ ಹಾಗೂ ಇಲಾಖೆಯ ಅನುದಾನದ ಮೂಲಕ ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮಕೈಗೊಳ್ಳುವ ಚಿಂತನೆ ಇಲಾಖೆಯದ್ದಾಗಿದೆ.
ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿವ ನೀರು ಮತ್ತು ನೈಮಲ್ಯ ವಿಭಾಗದ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್‌ಲೈನ್ ಮೂಲಕ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ. ಮುಖ್ಯವಾಗಿ ಅಂಗನವಾಡಿಗಳಿಗೆ ಅತ್ಯಗತ್ಯವಾಗಿರುವ ನೀರಿನ ಸಮಸ್ಯೆ ಬಗೆಹರಿದಂತಾಗಿದೆ.
ನಟರಾಜ, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂ.ಗ್ರಾಮಾಂತರ