

ಚಿಂಚೋಳಿ: ತಾಲೂಕಿನ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಅನೀಲಕುಮಾರ ಕಂಟ್ಲಿ ಅವರನ್ನು ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಳಿಸುವಂತೆ ತಾಲೂಕಿನ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಆಗ್ರಹವಾಗಿದೆ.
ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ಶೃದ್ಧೆಯಿಂದ ನಿರ್ವಹಿಸುತ್ತಿದ್ದು, ಈಗಾಗಲೇ ಹಲವು ಚುನಾವಣೆಯಲ್ಲಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಯಶಸ್ವಿಯಾಗಿ ನಿರ್ವಹಿಸಿದ್ದು, ಈ ಬಾರಿ ತಾಲೂಕಿನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಳಿಸುವಂತೆ ತಾಲೂಕಿನ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.