ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅನಿಲ್ ಕುಮಾರ್ ಮುಂದುವರಿಕೆ

Published on

ಬಳ್ಳಾರಿ : ಮುಂದಿನ ರಾಜ್ಯ ನಾಯಕರ ಆದೇಶದವರೆಗೆ ಬಿ.ಅನಿಲ ಕುಮಾರ ಮೋಕಾ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮುಂದುವರೆಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಪುರ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಆದ್ದರಿಂದ, ಅನಿಲ್ ಕುಮಾರ್ ಮೋಕಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದವರಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ಸಿಗಲಿದೆ. ಬಳ್ಳಾರಿಯಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ. ಗುಂಪುಗಾರಿಕೆಯಿದ್ದರೇ ಅನಿಲ್ ಕುಮಾರ ಅವರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮುಂದುವರೆಯುತ್ತಿರಲಿಲ್ಲ, ಅದೆಲ್ಲ ಸುಳ್ಳು ಎಂದು ಅಲ್ಲೆಗೆಳೆದರು. ಮಾಜಿ ಸಚಿವ ಬಿ.ಶ್ರೀರಾಮುಲು ಜತೆ ನಾನು ಸಂಪರ್ಕದಲ್ಲಿ ಇದ್ದೇನೆ. ಅವರು ನಮ್ಮ ಜತೆ ಇದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರ ಹಿರಿಯ ನಾಯಕರು ನಿರ್ಧಾರ ಮಾಡುತ್ತಾರೆ. ಯಾವಾಗಲೂ ಚುನಾವಣೆ ಪ್ರಕ್ರಿಯೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆಯಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net