ಅಂಜಲಿ ಹತ್ಯೆ ಖಂಡಿಸಿ ಪ್ರತಿಭಟನೆ

2
ಅಂಜಲಿ ಕೊಲೆ ಖಂಡಿಸಿ ಚಿಕ್ಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಸವಪ್ರಸಾದ ಜೊಲ್ಲೆ, ಶಾಂಭವಿ ಅಶ್ವತ್ಥಪುರ, ಅಪ್ಪಾಸಾಹೇಬ ಚೌಗಲಾ ಇತರರು ಇದ್ದರು.
Published on

ಚಿಕ್ಕೋಡಿ: ಹುಬ್ಬಳಿಯಲ್ಲಿ ನಡೆದ ಅಂಜಲಿ ಕೊಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕೋಡಿಯ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶನಿವಾರ ಪ್ರತಿಭಟಿಸಿದರು.

ಬಿಜೆಪಿಯ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಬಸವ ವೃತ್ತದಲ್ಲಿ ಜಮಾಯಿಸಿದರು. ಪ್ರತಿಭಟನೆಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉಪವಿಭಾಗಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತ್ಥಪುರ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. 6 ತಿಂಗಳಿಂದ ರಾಜ್ಯದಲ್ಲಿ ಯುವತಿಯರ ಸರಣಿ ಹತ್ಯೆಗಳು ಆಗುತ್ತಿವೆ. ವಂಟಮೂರಿ ಪ್ರಕರಣ, ನೇಹಾ ಕೊಲೆ ಹಾಗೂ ಇತ್ತೀಚಿಗೆ ಅಂಜಲಿ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟು ಹೋಗಿದೆ. ಗೃಹ ಸಚಿವ ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಸವಜ್ಯೋತಿ ಯುಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ಅಪ್ಪಾಸಾಹೇಬ ಚೌಗಲಾ, ವಿಶ್ವನಾಥ ಕಮತೆ, ಶಿವಾನಂದ ನವಲಿಹಾಳೆ, ಸಂಜೀವ ಪಾಟೀಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net