ಅಂಜಲಿ ಕೊಲೆ ಆರೋಪಿ ಗಿರೀಶ ಪೊಲೀಸರ ವಶಕ್ಕೆ

Girish Savant
Published on

ಹುಬ್ಬಳ್ಳಿ: ತನ್ನನ್ನು ಪ್ರೀತಿಸಲಿಲ್ಲ ಎಂಬ ಕಾರಣಕ್ಕೆ ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಆಕೆಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಶ್ವನಾಥ ಅಲಿಯಾಸ್ ಗಿರೀಶ ಎಂಬಾತನನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬುಧವಾರ ಬೆಳಗಿನ ಜಾವ ಅಂದಾಜು 5.30ಕ್ಕೆ ಅಂಜಲಿಯ ಮನೆಗೆ ನುಗ್ಗಿ, ಆರೋಪಿ ವಿಶ್ವ ಆಕೆಯನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ನಡೆದ ಕೆಲವೇ ದಿನಗಳಲ್ಲಿ ಅಂಜಲಿಯ ಕೊಲೆ ನಡೆದ ಘಟನೆ ಹುಬ್ಬಳ್ಳಿ ಹಾಗೂ ಸುತ್ತಲಿನ ಜನರನ್ನು ಆತಂಕಕ್ಕೀಡು ಮಾಡಿತ್ತು. ಹತ್ಯೆ ಖಂಡಿಸಿ ಗುರುವಾರ ಪ್ರತಿಭಟನೆ ನಡೆಸಲಾಗಿತ್ತು. ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಸಸ್ಪೆಂಡ್ ಮಾಡಲಾಗಿತ್ತು. ಆರೋಪಿ ಪತ್ತೆಗಾಗಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಎರಡು ಪ್ರತ್ಯೇಕ ತಂಡ ರಚಿಸಿದ್ದರು. ಗುರುವಾರ ರಾತ್ರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಖಚಿತ ಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net