ಆಂಜನೇಯಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ

26KMD-2
ಕರಡಕೆರೆ ಗ್ರಾಮದಲ್ಲೂ ವಿಜಯದಶಮಿ ಅಂಗವಾಗಿ ಶ್ರೀ ಆಂಜನೇಯಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.
Published on

ಕೆ.ಎಂ.ದೊಡ್ಡಿ: ಕರಡಕೆರೆ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.

ನೂರಾರು ವರ್ಷಗಳ ಹಿನ್ನೆಲೆಯುಳ್ಳ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಜಯದಶಮಿಯದು ಹನುಮಂತರಾಯನಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಸಂಜೆ ಉತ್ಸವ ಆರಂಭವಾಯಿತು. ಬೃಹತ್ ಆಕಾರದ ಹೂವಿನ ಪಲ್ಲಕ್ಕಿ ರಥದಲ್ಲಿ ಹನುಂತರಾಯನ ಉತ್ಸವ ಮೂರ್ತಿ ಇರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ಬನ್ನಿಮಂಟಪಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನೂರಾರು ಮಹಿಳೆಯರು, ಪುರುಷರು ಬಾಯಿಬೀಗ ಹಾಕಿಸಿಕೊಂಡು ಭಕ್ತಿ-ಭಾವ ಮೆರೆದರು. ಉತ್ಸವದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿ ದೇಗುಲ ಸೇರಿದಂತೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net