

ಮಡಿಕೇರಿ: ವಿದ್ಯಾಭ್ಯಾಸದ ಜತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ ಎರಡು ವಿ?ಯವನ್ನು ಸಮಾನವಾಗಿ ಸ್ವೀಕರಿಸಿ ಎಂದು ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರು ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿನಿ ಅಂಕಿತಾ ಸುರೇಶ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ’ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ಮತ್ತು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಇದ್ದಲ್ಲಿ ಹೆಚ್ಚಿನ ಸಾಧನೆ ಮಾಡಬಹುದು. ಆ ನಿಟ್ಟಿನಲ್ಲಿ ಎರಡೂ ಕ್ಷೇತ್ರದಲ್ಲಿಯೂ ಹೆಚ್ಚಿನ ಗಮನಹರಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ದ್ವಿತೀಯ ಪಿಯುಸಿ ಎಂಬುದು ಮಹತ್ತರವಾದ ಮೆಟ್ಟಿಲು. ಈ ಹಂತವು ಜೀವನದ ಮಹತ್ವವಾದ ನಿರ್ಧಾರವನ್ನು ತೆಗೆದುಕೊಳ್ಳುವ ಹಂತ. ಈ ಹಂತವನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿ ಮುಂದೆ ಸಾಗಬೇಕು. ಕಾಲೇಜಿನ ಹೆಸರನ್ನು ವಿದ್ಯಾರ್ಥಿಗಳು ದೇಶ ವಿದೇಶದಲ್ಲೂ ಪಸರಿಸುವಂತೆ ಸಾಧನೆ ಮಾಡಬೇಕು. ತಾವು ಓದಿದ ಕಾಲೇಜಿನ ಹಿರಿಮೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಎಲ್ಲರ ಪಾತ್ರ ಅತಿ ಮುಖ್ಯ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಮಾತನಾಡಿ, ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅವಕಾಶಗಳನ್ನು ಬಳಸಿಕೊಂಡು ತಮ್ಮ ಗುರಿ ತಲುಪಬೇಕು. ವಿದ್ಯಾರ್ಥಿಗಳು ಉತ್ತಮ ಸತ್ಪ್ರಜೆಯಾಗುವಲ್ಲಿ ಶಿಕ್ಷಕರ ಪರಿಶ್ರಮ ಅತಿ ಮುಖ್ಯ, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನ ಪಡೆದು ಒಂದು ಉನ್ನತ ಪದವಿಗೆ ಹೋಗುವಂತಾಗಲಿ ಎಂದು ಶುಭ ಹಾರೈಸಿದರು.
ಆಕಾಶವಾಣಿಯ ಸುಬ್ರಾಯ ಸಂಪಾಜೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಅತಿ ಮುಖ್ಯ. ವಿದ್ಯಾರ್ಥಿಯನ್ನು ಸರಿದಾರಿಗೆ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯವಾದುದ್ದು. ವಿದ್ಯಾರ್ಥಿಗಳು ತಮ್ಮ ಬದುಕಿಗೆ ಬೇಕಾದ ಬೇಕು/ಬೇಡಗಳನ್ನು ತಾವೇ ನಿರ್ಧರಿಸಿಕೊಳ್ಳಬೇಕು. ಒಳ್ಳೆಯ ವಿ?ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ಜೀವನ ರೂಪುಗೊಳ್ಳುವಲ್ಲಿ ಒಳ್ಳೆಯ ರೀತಿ, ನೀತಿಯನ್ನು ಅಳವಡಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದ ಅವರು, ಯಾವುದೇ ವಿ?ಯದಲ್ಲಾದರೂ ಆಸಕ್ತಿಯನ್ನು ಬೆಳೆಸಿಕೊಂಡು ಸತ್ಯ, ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಸಾಧ್ಯ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ, ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಇತರರಿದ್ದರು.