

ಕುಂದಾಪುರ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ ಅನುದಾನಿತ- ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಮಂಗಳವಾರ ನಡೆದ 2024-25ರ ಜಿಲ್ಲಾಮಟ್ಟದ ಕ್ರೀಡಾಕೂಟದ ಹ್ಯಾಮರ್ ಥ್ರೋನಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ ವಿ. ಶೇಟ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲ ಸಹಿತ ಹಲವರು ಸಾಧಕಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.