ಅಂಕೋಲಾದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

25-ankola- car
Published on

ಅಂಕೋಲಾ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿ ಅಂಚಿಗೆ ಪಲ್ಟಿಯಾದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಸಮೀಪದ ಗೌರಿಕೇರಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕಾರು ಯಲ್ಲಾಪುರ ಉಮ್ಮಚ್ಚಗೆಯಿಂದ ಕಾರವಾರಕ್ಕೆ ಹೋಗುವಾಗ ಅವಘಡ ನಡೆದಿದೆ. ಅಪಘಾತದ ರಭಸಕ್ಕೆ ವಾಹನ ತಲೆ ಕೆಳಗಾಗಿ ಬಿದ್ದಿದೆ. ಅದೃಷ್ಟವಶಾತ್ ಕಾರಿನ ಏರ್‌ಬ್ಯಾಗ್ ಓಪನ್ ಆಗಿದ್ದರಿಂದ ಚಾಲಕ ಹಾಗೂ ಸಹ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net