

ಅಂಕೋಲಾ: ಈಡಿಗ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವಿಶೇಷ ಸಭೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ. 9ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ತಾಲೂಕು ಹಾಗೂ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಈಡಿಗ ಮಹಾಮಂಡಳಿಯ ತಾಲೂಕು ಅಧ್ಯಕ್ಷ ಡಿ.ಜಿ. ನಾಯ್ಕ ಹೇಳಿದರು. ಕಾರ್ಯಕ್ರಮದ ಕುರಿತು ಬುಧವಾರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರು ಜಾಗೃತರಾಗಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಡಿಗರ ಜತೆ ಹಿಂದುಳಿದ ವರ್ಗದ ಸ್ವಾಮೀಜಿಗಳು ಹಾಗೂ ರಾಜಕೀಯ ನಾಯಕರು ಕೂಡ ಆಗಮಿಸುತ್ತಿದ್ದಾರೆ ಎಂದರು. ಗೌರವಾಧ್ಯಕ್ಷ ಮಾದೇವ ನಾಯ್ಕ, ಜಿಲ್ಲಾ ಮಹಿಳಾ ಗೌರವಾಧ್ಯಕ್ಷೆ ಮಂಜುಳಾ ನಾಯ್ಕ, ಉಪಾಧ್ಯಕ್ಷರಾದ ರಮೇಶ ನಾಯ್ಕ ಬೊಬ್ರುವಾಡ, ಉಮೇಶ ನಾಯ್ಕ, ಸಂಜಯ ನಾಯ್ಕ, ಖಜಾಂಚಿ ಶ್ರೀಪಾದ ನಾಯ್ಕ, ಯುವ ಘಟಕದ ಅಧ್ಯಕ್ಷ ಮಂಜುನಾಥ ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗರಾಜ ಎಂ. ಇತರರಿದ್ದರು.