ಸುಳ್ಯ: ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರರ ಜೀವನ ಕುರಿತು ಲೇಖಕ ಅರವಿಂದ ಚೊಕ್ಕಾಡಿ ಬರೆದಿರುವ ಪುಸ್ತಕದ ಬಿಡುಗಡೆ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿರುವ ಕವಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸನ್ಮಾನ ಜ.14ರಂದು ಕೇರ್ಪಳ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದೆ.
ತರುಣ ಸಮಾಜ ಸುಳ್ಯದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಾಲಾವಲಿಕರ್ ರಾಜಾಪುರಿ ಸಾರಸ್ವತ ಸಮಾಜದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತರುಣ ಸಮಾಜದ ಅಧ್ಯಕ್ಷ ಎಂ.ಬಿ.ಸದಾಶಿವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಪುಸ್ತಕ ಬಿಡುಗಡೆ ಮಾಡುವರು. ಕೃತಿಯ ಲೇಖಕ ಅರವಿಂದ ಚೊಕ್ಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡುವರು ಎಂದರು.
ಕ.ಸಾ.ಪ. ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು, ಬಾಲಾವಲಿಕರ್ ರಾಜಾಪುರಿ ಸಾರಸ್ವತ ಸಮಾಜದ ಕೋಶಾಧಿಕಾರಿ ದೇವದಾಸ ಪ್ರಭು, ಯುವ ಘಟಕದ ಅಧ್ಯಕ್ಷ ಸಂದೀಪ್ ನಾಯಕ್ ಇದ್ದರು.