

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ ಕುಟುಂಬ ಸಮೇತ ಆಗಮಿಸಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದ ಗಡಿಬಿಡಿಯಿಂದ ಹೊರಬಂದಿರುವ ಅಣ್ಣಾಮಲೈ ಕುಟುಂಬ ಸಮೇತ ಆಗಮಿಸಿ ರಾಯರ ದರ್ಶನ ಪಡೆದಿದ್ದಾರೆ. ಬೃಂದಾವನದ ದರ್ಶನದ ನಂತರ ಶ್ರೀಮಠದ ಪೀಠಾಪತಿ ಡಾ.ಸುಬುಧೇಂದ್ರ ತೀರ್ಥರು ಅಣ್ಣಾಮಲೈ ದಂಪತಿಗಳಿಗೆ ಸನ್ಮಾನಿಸಿ, ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ಸಹಾಯಕ ವ್ಯವಸ್ಥಾಪಕ ಐ.ಪಿ.ನರಸಿಂಹಾಚಾರ್ ಉಪಸ್ಥಿತರಿದ್ದರು.