

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ, ಡಿವೈಎಸ್‌ಪಿ ಶಿವಕುಮಾರ್, ಆರಕ್ಷಕ ವೃತ್ತ ನಿರೀಕ್ಷಕ ನಯಾಜ್ ಬೇಡ್, ಉಪನಿರೀಕ್ಷಕ ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ನಂತರ ಇಡೀ ಪ್ರಕರಣದ ಬಗ್ಗೆ ನಿಖರ ಕಾರಣ ತಿಳಿಯಲಿದೆ. ಆರೋಪಿಗೆ ಪಿಸ್ತೂಲ್ ಎಲ್ಲಿಂದ ಬಂತು ಎಂಬ ಬಗ್ಗೆಯೂ ವಿಚಾರಣೆ ಮಾಡುತ್ತೇವೆ.
- ಕುಶಾಲ್ ಚೌಕ್ಸಿ, ಎಸ್‌ಪಿ, ಚಿಕ್ಕಬಳ್ಳಾಪುರ ಜಿಲ್ಲೆ