ಎಕ್ಸ್‌ಲೆನ್ಸ್ ವಿದ್ಯಾಶಾಲೆಯಲ್ಲಿ ವಾರ್ಷಿಕೋತ್ಸವ ಕಲಾಸಂಜೆ

21
Published on

ಮೈಸೂರು: ಕೇರ್ಗಳ್ಳಿಯ ವಿದ್ಯಾಮಿತ್ರ ಅಕಾಡೆಮಿ ಫಾರ್ ಎಕ್ಸ್‌ಲೆನ್ಸ್ ವಿದ್ಯಾಶಾಲೆಯ ವಾರ್ಷಿಕೋತ್ಸವ ಕಲಾಸಂಜೆ ಕಾರ್ಯಕ್ರಮವನ್ನು ವೈಭವದಿಂದ ಆಚರಿಸಲಾಯಿತು.

ಗ್ರಾಮದ ಶ್ರೀಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾಮಿತ್ರ ಎಜ್ಯುಕೇಷನ್ ಆ್ಯಂಡ್ ಕಲ್ಚರಲ್ ಟ್ರಸ್ಟ್‌ನ ಅಧ್ಯಕ್ಷ ಎಸ್.ರಾಧಾಕೃಷ್ಣ ಮಾತನಾಡಿ, ಶಾಲೆಯಲ್ಲಿ ಮುಂಬರುವ ದಿನಗಳಲ್ಲಿ ಪಿಯುಸಿ ತರಗತಿಗಳನ್ನು ಆರಂಭಿಸುವುದರೊಂದಿಗೆ ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿದರು.

ಎಂಐಟಿ ಅಧ್ಯಕ್ಷ ಡಾ.ಎಸ್.ಮುರಳಿ ಮಾತನಾಡಿ, ವಿದ್ಯೆ ಐಶ್ವರ್ಯಕ್ಕಿಂತ ಮಿಗಿಲಾದುದು. ಆದ್ದರಿಂದ ಎಲ್ಲರೂ ವಿದ್ಯಾವಂತರಾಗುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೋರಿದರು.

ಸನ್ಮಾನ ಸ್ವೀಕರಿಸಿದ ಶ್ರೀಹೊಂಬಾಳಮ್ಮ ಸಿದ್ದರಾಮೇಶ್ವರ ಟ್ರಸ್ಟ್ ಅಧ್ಯಕ್ಷ ಎಂ.ಕೆಂಚಪ್ಪ ಮಾತನಾಡಿ, ಶಾಲೆ ನಡೆಸಲು ಅಗತ್ಯವಿರುವ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿ ಟ್ರಸ್ಟ್ ವತಿಯಿಂದ ಶಾಲೆಯನ್ನು ಚೆನ್ನಾಗಿ ನಡೆಸಲು ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು. ಶಾಲೆಯ ಛೇರ್ಮನ್ ವಿ.ಜಯಂತ್, ಆಡಳಿತಾಧಿಕಾರಿ ಚಂದ್ರಕಲಾ, ಮುಖ್ಯಶಿಕ್ಷಕ ಎಸ್.ಮಹಾದೇವ , ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ, ಕೇರ್ಗಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಸವೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net