ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಸಿಗುವಂತಾಗಲಿ: ಕೆಂಗೇರಿ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ

Anniversary at Channamma Education Trust Mandya
Published on
ಮಂಡ್ಯ: ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಸಿಗುವಂತಾಗಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ತಾಲೂಕಿನ ಎಚ್.ಮಲ್ಲಿಗೆರೆ ಗ್ರಾಮದ ಚನ್ನಮ್ಮ ಎಜುಕೇಷನ್ ಟ್ರಸ್ಟ್‌ನಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕ ಜಯಶಂಕರ್ ಅವರ ಪರಿಸರ ಪ್ರೀತಿ ಹಾಗೂ ಪ್ಲಾಸ್ಟಿಕ್ ವಿರೋಧಿ ಅಭಿಯಾನ ಅಭಿನಂದನೀಯ ಎಂದು ಶ್ಲಾಘಿಸಿದರು.
ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್ ಮಾತನಾಡಿ, ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಕಡೆಗೂ ಗಮನಹರಿಸಬೇಕು. ಜಯಶಂಕರ್ ಅವರ ಪರಿಸರ ಜಾಗೃತಿ ಅಭಿಯಾನ ಇದೇ ರೀತಿ ಮುಂದುವರೆಯಲಿ ಎಂದರು.
ಉತ್ತರ ವಲಯ ಬಿಇಒ ಕೆ.ಟಿ.ಸೌಭಾಗ್ಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಟ್ರಸ್ಟ್‌ನ ಸಂಸ್ಥಾಪಕ ಜಯಶಂಕರ್, ಕಾರ್ಯದರ್ಶಿ ವೈ‌.ಎಂ.ರತ್ನಾ, ಬೆಂಗಳೂರು ಇಂದಿರಾನಗರದ ರೋಟಿರಿಯನ್ ಎಂ.ಮಂಜುಳಾ, ಸಮಾಜಸೇವಕ ಬೋರೇಗೌಡ, ನಿವೃತ್ತ ವಿಷಯ ಪರಿವೀಕ್ಷಕ ನಂಜರಾಜು, ಹೆಮ್ಮಿಗೆ ಪಟೇಲ್, ಚಿಕ್ಕಣ್ಣ ಇತರರಿದ್ದರು.
ವಾರ್ಷಿಕೋತ್ಸವದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎಚ್.ಮಲ್ಲಿಗೆರೆ ಸೇರಿದಂತೆ ಅಕ್ಕಪಕ್ಕದ ಗ್ರಾಮದ ಜನರು ಆಗಮಿಸಿ ವಿದ್ಯಾರ್ಥಿಗಳ ಪ್ರದರ್ಶನವನ್ನು ಕಣ್ತುಂಬಿಕೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net