17ರಿಂದ ಹಿರೇಮಠದಲ್ಲಿ ವಾರ್ಷಿಕೋತ್ಸವ

sadashiva shivaacharya swamiji
Published on

ಆಲೂರು: ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿರುವ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಸಂಸ್ಥಾನ ಹಿರೇಮಠದಲ್ಲಿ ಡಿ.17ರಿಂದ 21ರವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಪಟ್ಟಾಧಿಕಾರದ ತೃತೀಯ ವಾರ್ಷಿಕೋತ್ಸವ, ಶ್ರೀ ರುದ್ರಮುನಿ ಶಿವಾಚಾರ್ಯಸ್ವಾಮೀಜಿ 45ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಜನ್ಮ ವಧರ್ಂತಿ ಮಹೋತ್ಸವ ನಡೆಯಲಿದೆ ಎಂದು ಶ್ರೀಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಈ ಬಾರಿ ಧರ್ಮ ಸಂವರ್ಧಕ ಪ್ರಶಸ್ತಿಯನ್ನು ಅರಕಲಗೂಡು ತಾಲೂಕಿನ ಸಮಾಜ ಸೇವಕ ಹಾಗೂ ಸ್ಟೋನ್ ಕ್ರಷರ್ ಮಾಲೀಕ ಸುರೇಶ್ ಮತ್ತು ಧರ್ಮ ಹಿತಚಿಂತಕ ಪ್ರಶಸ್ತಿಯನ್ನು ಅಖಿಲ ಭಾರತ ವೀರಶೈವ ಸಭಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ ಎಸ್.ಎಸ್, ದಾಸೋಹ ಸೇವಾ ಪೋಷಣಾ ಪ್ರಶಸ್ತಿಯನ್ನು ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿ ಅವರಿಗೆ ನೀಡಿ ಸನ್ಮಾನಿಸಲಾಗುವುದು ಎಂದು ಕಾರ್ಜುವಳ್ಳಿ ಹಿರೇಮಠದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net