ಪಟ್ಟದರಾಣಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ

29hgr1
ಹಲಗೂರಿನ ಪಟ್ಟದರಾಣಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಭಕ್ತರು
Published on

ಹಲಗೂರು: ಇಲ್ಲಿನ ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ಅಮ್ಮನವರ ದೇವಸ್ಥಾನದಲ್ಲಿ ಸೇವಾ ಟ್ರಸ್ಟ್ ವತಿಯಿಂದ ಮೂರನೇ ವರ್ಷದ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಶುಕ್ರವಾರ ಬೆಳಗ್ಗೆ ದೇವಸ್ಥಾನದ ಆವರಣದಲ್ಲಿ ಗಣಪತಿ , ಸುಬ್ರಹ್ಮಣ್ಯ, ಗಾಯತ್ರಿ ದೇವಿ ದುರ್ಗಾ ಹೋಮ, ಪಂಚಾಮೃತ ಅಭಿಷೇಕ ಮಾಡಲಾಯಿತು. ಅಮ್ಮನವರನ್ನು ವೀಳ್ಯದೆಲೆಯಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಿಂದ ಪಟ್ಟದರಾಣಿ ಹಾಗೂ ಸಿದ್ದೇಶ್ವರಸ್ವಾಮಿ ಸತ್ತಿಗೆಗಳನ್ನು ಹೂವು ಹೊಂಬಾಳೆ , ವಿವಿಧ ಪುಷ್ಪಗಳಿಂದ ಅಲಂಕರಿಸಿ ಮೆರವಣಿಗೆ ಮುಖಾಂತರ ದೇವಸ್ಥಾನದ ಆವರಣಕ್ಕೆ ತರಲಾಯಿತು. ಅರ್ಚಕರು ಮಹಾಮಂಗಳಾರತಿ ಮಾಡಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಸೇವಾ ಸಂಸ್ಥೆಯ ಅಧ್ಯಕ್ಷ ಮಂಜು, ಸದಸ್ಯರು ಹಾಗೂ ಸಮುದಾಯದ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net