ಶೈಕ್ಷಣಿಕ ಸಾಧನೆಗೆ ವಾರ್ಷಿಕೋತ್ಸವ ಪೂರಕ

gowrava
Published on

ಸಿದ್ದಾಪುರ: ಶಾಲಾ ವಾರ್ಷಿಕೋತ್ಸವ ಮಕ್ಕಳು ಹಾಗೂ ಪಾಲಕರಿಗೆ ಶೈಕ್ಷಣಿಕ ವರ್ಷದ ಉತ್ಸವದೊಂದಿಗೆ ಮಕ್ಕಳ ಪ್ರತಿಭೆ ಹೊರಬರಲು ಕಾರಣವಾಗುತ್ತದೆ. ಸರಸ್ವತಿ ವಿದ್ಯಾಲಯ ಭಾರತೀಯ ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸ ಮಾಡುತ್ತಿರುವುದು ಪ್ರಶಂಸನೀಯ ಎಂದು ಕುಂದಾಪುರ ಶಾಸಕ ಎ.ಕಿರಣ್‌ಕುಮಾರ ಕೊಡ್ಗಿ ಹೇಳಿದರು.

ಸಿದ್ದಾಪುರ ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅನಾವರಣದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಸನ್ಮಾನಿಸಿ ಮಾತನಾಡಿದರು.

ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಉಪ್ಪುಂದ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸರಸ್ವತಿ ವಿದ್ಯಾಲಯದ ಸಂಚಾಲಕ ಡಿ.ಗೋಪಾಲಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದರು. ಶಾಸಕ ಗುರುರಾಜ್ ಗಂಟಿಹೊಳೆ, ವಿಶ್ವಸ್ಥರಾದ ಮಧುಸೂದನ್ ಕಾಮತ್, ಶ್ರೀನಾಥ್ ಪೈ, ಪಾಂಡುರಂಗ ಕಾಮತ್, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಅಧ್ಯಕ್ಷ ಟಿ.ಜಿ.ಪಾಂಡುರಂಗ ಪೈ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆಡಳಿತಾಧಿಕಾರಿ ಸೌಭಾಗ್ಯ ಹೆಗಡೆ ಸ್ವಾಗತಿಸಿ, ಪ್ರಾಂಶುಪಾಲೆ ಶ್ವೇತಾ ಗಣೇಶ್ ವರದಿ ವಾಚಿಸಿದರು. ಸಹ ಶಿಕ್ಷಕಿ ಪೂರ್ಣಿಮಾ ಆಚಾರ್ಯ, ಪೂರ್ಣಿಮಾ ಸುಭಾಷ್ ಕಾರ್ಯಕ್ರಮ ನಿರೂಪಿಸಿದರು. ಜಯಶೀಲ ನಾಯಕ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net