ಲಕ್ಷ್ಮೀ ನರಸಿಂಹ ದೇವಸ್ಥಾನದ ವಾರ್ಷಿಕೋತ್ಸವ

ylp jodalla
Published on

ಯಲ್ಲಾಪುರ: ತಾಲೂಕಿನ ತಟಗಾರ ಗ್ರಾಮದ ಜೋಡಳ್ಳ ಲಕ್ಷ್ಮೀ ನರಸಿಂಹ ದೇವಸ್ಥಾನದ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ನಡೆದವು.

ವೈದಿಕರಾದ ಕಟ್ಟೆ ಶಂಕರ ಭಟ್ಟ, ರಾಮಚಂದ್ರ ಭಟ್ಟ ಹಿತ್ಲಕಾರಗದ್ದೆ ಅವರ ನೇತೃತ್ವದಲ್ಲಿ ಭಾನುವಾರ ಸ್ನಪನಾಧಿವಾಸ ಹೋಮ, ತತ್ವ ಹೋಮ, ಆವರಣ ಪರಿವಾರ ಹೋಮ, ಶ್ರೀ ಸೂಕ್ತ ಹೋಮ, ಪುರುಷ ಸೂಕ್ತ ಹೋಮ, ಪ್ರಾಯಶ್ಚಿತ ಹೋಮ, ನರಸಿಂಹ ಶಾಂತಿ ಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಿತು.

ಉತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ನಡೆದ ಅನ್ನ ಸಂತರ್ಪಣೆಯಲ್ಲಿ ಸುತ್ತಮುತ್ತಲಿನ ನೂರಾರು ಭಕ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net