

ನಾಪೋಕ್ಲು: ಸಮೀಪದ ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವವು ಮಾ.24ರಿಂದ 28ರವರೆಗೆ ನಡೆಯಲಿದೆ.
ಮಾ.24ರಂದು ರಾತ್ರಿ ಅಂದಿ ಬೊಳಕ್, 26ರಂದು ವಿಶೇಷ ಪೂಜೆಗಳ ನಂತರ ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ. 27ರಂದು ದೇವಿಯ ಜಳಕ, 28ರಂದು ನಾಗ ಪೂಜೆ ಹಾಗೂ ಶುದ್ಧ ಕಳಸದೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ. ವಾರ್ಷಿಕ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯದ ತಕ್ಕ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ಮನವಿ ಮಾಡಿದೆ.