

ಕೊಕ್ಕರ್ಣೆ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲಾ ವಾರ್ಷಿಕೋತ್ಸವ ಕಾಲೇಜಿನ ಆವರಣದಲ್ಲಿ ಜರುಗಿತು.
ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಎಚ್.ಪ್ರಭಾಕರ ಶೆಟ್ಟಿ, ಎಚ್.ಶಂಭು ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘ ಸದಸ್ಯ ಮಹೇಶ್ ಶೆಟ್ಟಿ, ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಉಪಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮತ್ತು 2024-25ನೇ ಸಾಲಿನಲ್ಲಿ ವಿವಿಧ ಸ್ಪರ್ಧೆ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರಾಂಶುಪಾಲ ಡಾ.ಪ್ರವೀಣ್ ಶೆಟ್ಟಿ, ಪ್ರೌಢ ಶಾಲಾ ಮುಖ್ಯಶಿಕ್ಷಕ ನಾರಾಯಣ ಮಣೂರು ವರದಿ ವಾಚಿಸಿದರು. ಉಪನ್ಯಾಸಕರಾದ ಸುರೇಶ್, ಶ್ವೇತಶ್ರೀ, ದಿನೇಶ್ ಶೆಟ್ಟಿ, ಸುಪ್ರೀತಾ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಪುರುಷೋತ್ತಮ ಪಿ.ನಿರೂಪಿಸಿದರು. ಅಧ್ಯಾಪಕ ಕಿಶೋರ ಶೆಟ್ಟಿ ವಂದಿಸಿದರು.