ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ
Published on

ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಕೂರುಳಿ ಸುಭಾಷ್‌ನಗರ ಭವನದಲ್ಲಿ ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪುರುಷೋತ್ತಮ ವಾರ್ಷಿಕೋತ್ಸವ ಉದ್ಘಾಟಿಸಿದರು. ಸದಸ್ಯರಿಗೆ ಜ್ಞಾನ ವಿಕಾಸದ ಬಗ್ಗೆ, ಸುರಕ್ಷಾ ಆರೋಗ್ಯ, ರಕ್ಷಾ ಹಿಡುವಳಿ ಯೋಜನೆ ಬಗ್ಗೆ ಮೇಲ್ವಿಚಾರಕರು ಮಾರ್ಗದರ್ಶನ ನೀಡಿದರು. ಸದಸ್ಯರಿಗೆ ವಿವಿಧ ಕ್ರೀಡಾಕೂಟ ಆಯೋಜಿಸಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಸೇವಾಪ್ರತಿನಿಧಿ ಉಮಾಲಕ್ಷ್ಮೀ, ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net