ಸಿರಿಬಾಗಿಲು ಸಾಂಸ್ಕೃತಿಕ ಭವನದ ವಾರ್ಷಿಕೋತ್ಸವ

Published on

ಕಾಸರಗೋಡು: ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಪ್ರಥಮ ವಾರ್ಷಿಕೋತ್ಸವ ಡಿ.26ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಜರುಗಲಿದೆ. 26ರಂದು ಬೆಳಗ್ಗೆ 7ರಿಂದ ಭಜನೆ, 10ಕ್ಕೆ ಪ್ರತಿಷ್ಠಾನದ ಮಕ್ಕಳ ತಂಡದ ಯಕ್ಷಗಾನ ತಾಳಮದ್ದಳೆ ಜರುಗಲಿದೆ. ಮಧ್ಯಾಹ್ನ 2ರಿಂದ ಪ್ರತಿಷ್ಠಾನದ ಯಕ್ಷಗಾನ ಗುರು ಲಕ್ಷ್ಮಣ ಕುಮಾರ್ ಮರಕಡ ಅವರ ನಿರ್ದೇಶನದಲ್ಲಿ ಮಕ್ಕಳ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 4ಕ್ಕೆ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಧುರಾ ಉಪಾಧ್ಯ ಬೆಂಗಳೂರು, ಪಣಂಬೂರು ಶಂಕರನಾರಾಯಣ ಕಾರಂತ, ಲಕ್ಷ್ಮಣ ಕುಮಾರ್ ಮರಕಡ ಅವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಲಾಗುವುದು. ನಂತರ ಪ್ರತಿಷ್ಠಾನದ ಯಕ್ಷಗಾನ ತಂಡದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net