ದೇವಾಲಯದ ಪುನರ್ ಪ್ರತಿಷ್ಠಾಪನೆ ವಾರ್ಷಿಕೋತ್ಸವ

Anniversary of the re-consecration of the temple
Published on

ಮಡಿಕೇರಿ:

ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 21ನೇ ವಾರ್ಷಿಕೋತ್ಸವ ಸೆ.24 ರಿಂದ ಸೆ.26ರ ವರೆಗೆ ನಡೆಯಲಿದೆ.

ಸೆ.24 ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.25 ರಂದು ಬೆಳಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿAದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶ ಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.

ಸೆ.26 ರಂದು ಬೆಳಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಅನ್ನದಾನ ನೆರವೇರಲಿದೆ ಎಂದು ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net