ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ

FotoJet (1)
Published on

ಬಿಡದಿ ಪುರಸಭೆ ಅಧ್ಯಕ್ಷ ಹರಿಪ್ರಸಾದ್ ಅಭಿಮತ

ಬಿಡದಿ : ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ಬಿಡದಿ ಪುರಸಭೆ ಅಧ್ಯಕ್ಷ ಹರಿಪ್ರಸಾದ್ ಅಭಿಪ್ರಾಯ ಪಟ್ಟರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಅಭಿವೃದ್ಧಿಗೆ ಪೂರಕವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಶಿಕ್ಷಕ ವೃಂದ ಹಾಗೂ ಪಾಲಕರು ಶ್ರಮಿಸಬೇಕು ಎಂದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಮಾತನಾಡಿ, ವ್ಯಾಸಂಗದ ಜತೆಯಲ್ಲಿ ಮಕ್ಕಳು ಸಾಂಸ್ಕೃತಿಕವಾಗಿಯೂ ಬೆಳೆಯುವಂತಾಗಬೇಕು. ಪಠ್ಯೆತರ ಚಟುವಟಿಕೆಗಳಿಂದ ಜ್ಞಾನ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ. ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜತೆಗೆ ಉತ್ತಮವಾದ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸುವ ಹವ್ಯಾಸ ರೂಢಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆ. ಇದರಿಂದ ಬುದ್ಧಿಶಕ್ತಿ, ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ಎಂದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಇಸಿಒ ನಂಜುಂಡಪ್ಪ, ರಾಜಣ್ಣ, ಶಿಕ್ಷಕರಾದ ರುಕ್ಮಿಣಿಬಾಯಿ, ಪ್ರಶಾಂತ್, ಜ್ಯೋತಿ, ಶೋಭಾ, ನಮಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net