

ಕಾಸರಗೋಡು: ರಾಜ್ಯದ ಉನ್ನತ ಶಿಕ್ಷಣ ವಲಯದ ಅಂತಾರಾಷ್ಟ್ರೀಯ ಗುಣಮಟ್ಟ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂಬುದಾಗಿ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವೆ ಡಾ.ಆರ್.ಬಿಂದು ತಿಳಿಸಿದ್ದಾರೆ.
ಲಾಲ್ಬಹದ್ದೂರ್ ಶಾಸ್ತ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ಬಿಎ ಅಕ್ರೆಡಿಟೇಶನ್ ಪ್ರಕಟಣೆ ಮತ್ತು ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಶಾಸಕ ಸಿಎಚ್ ಶಾಸಕ ಕುಞಂಬು ಅಧ್ಯಕ್ಷತೆ ವಹಿಸಿದ್ದರು. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇಶಿತಾ ರಾಯ್, ಎಐಸಿಟಿಇ ಮಾರ್ಗದರ್ಶಕ ಡಾ.ರಮೇಶ್ ಉಣ್ಣಿಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮುಳಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ವಿ.ಮಿನಿ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೈಜಾ ರಶೀದ್ ಮೊದಲಾದವರು ಉಪಸ್ಥಿತರಿದ್ದರು.