ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೆ

5
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ ಮಾರೂರು ಖಂಡಿಗ ರಾಮದಾಸ ಆಸ್ರಣ್ಣರ ಪೌರೋಹಿತ್ಯದಲ್ಲಿ ಆರಂಭಗೊಂಡಿತು. ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವ ಕಾರ್ಯಕ್ರಮ, ಧ್ವಜಾರೋಹಣ, ಬಲಿ ಚೆಂಡು ಕಾರ್ಯಕ್ರಮ, ಭೂತಬಲಿ ಉತ್ಸವ, ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ ಸೋಮವಾರ ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು.

ಕ್ಷೇತ್ರದ ಆನುವಂಶಿಕ ಆಡಳಿತದಾರ ಎ.ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿ, ವಿಕಾಸ್ ಜೈನ್, ವಿಶ್ವಾಸ್ ಜೈನ್ ಹಾಗೂ ಭಕ್ತರು ಉಪಸ್ಥಿತರಿದ್ದರು. ಮಾ.18ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ, ಪಡ್ಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net