ವೀರಾಂಜನೇಯಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವ

ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ನಡೆದವೀರಾಂಜನೇಯಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವದಲ್ಲಿ  ಸಂತೋಷ್,ನಂಜುಂಡಪ್ಪ, ರಾಜಣ್ಣ, ನಿಂಗರಾಜು, ರಾಜೇಗೌಡ, ನಂದೀಶ, ಹೇಮಂತಕುಮಾರ್ ಅವರನ್ನು ಗೌರವಿಸಲಾಯಿತು.  ಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು.

Published on: 

ಅರಕಲಗೂಡು: ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಇತ್ತೀಚೆಗೆ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ನಡೆಯಿತು.

ಪುರಾತನ ಕಾಲದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯ ಶಿಥಿಲಗೊಂಡಿದ್ದರಿಂದ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ನೂತನ ದೇವಾಲಯ ಸ್ಥಾಪಿಸಿ ಉದ್ಘಾಟನೆ ಭಾಗ್ಯ ಕಂಡು ವರ್ಷ ಪೂರೈಸಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಕಾರ್ತಿಕ ದೀಪೋತ್ಸವ ನಡೆಯಯಿತು. ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸಂಜೆ ಮನರಂಜನಾ ಕಾರ್ಯಕ್ರಮ ನಡೆಯಿತು.

ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಗ್ರಾಮಸ್ಥರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶ್ರೀ ವೀರಭದ್ರೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಸಂತೋಷ್, ಊರಿನ ಮುಖಂಡರಾದ ನಂಜುಂಡಪ್ಪ, ರಾಜಣ್ಣ, ನಿಂಗರಾಜು, ರಾಜೇಗೌಡ, ಅರ್ಚಕ ನಂದೀಶ, ಹೇಮಂತಕುಮಾರ್ ಅವರನ್ನು ಗೌರವಿಸಲಾಯಿತು.