

ವಿಜಯವಾಣಿ ಸುದ್ದಿಜಾಲ ಶಿರ್ವ
ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಹಂತ ಹಂತವಾಗಿ ಬೆಳವಣಿಗೆ ದಾಖಲಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸಂಸ್ಥೆಯಾಗಿ ಬದಲಾಗಲು ಅಗತ್ಯವುಳ್ಳ ತಯಾರಿ ಮಾಡಿಕೊಳ್ಳುತ್ತಿದೆ. ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಸಮಾರಂಭ ಮಾ.20 ರಿಂದ 23ವರೆಗೆ ನಡೆಯಲಿದೆ ಎಂದು ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಕುಮಾರ್ ಹೇಳಿದರು.
20ರಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ ಉದ್ಘಾಟಿಸಲಿದ್ದಾರೆ. ಪವನ್‌ಕುಮಾರ್ ಶೆಟ್ಟಿ, ಉಷಾ ರಾಮಚಂದ್ರ ಭಟ್ ಭಾಗವಹಿಸಲಿದ್ದಾರೆ. ಸಂಸ್ಥೆ ಕಾರ್ಯದರ್ಶಿ ರತ್ನ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
21ರಂದು ಸಂಜೆ ವರ್ಣೋತ್ಸವ ಸಮಾರಂಭ ನಡೆಯಲಿದ್ದು, ಬೆಂಗಳೂರಿನ ಮಿರಾಫ್ರ ಟೆಕ್ನಾಲಜೀಸ್‌ನ ಪ್ರಾಕ್ಟಿಸ್ ಹೆಡ್ ಅನಾಲಾಗ್ ವಿನೋದ್ ಜಾನ್, ನಟ ಪೃಥ್ವಿ ಅಂಬಾರ್ ಉಪಸ್ಥಿತರಿರುವರು. ಸೋದೆ ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದಾರೆ. 22ರಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದ್ದು, ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿ ನಿರ್ದೇಶಕ ಡಾ.ಎನ್.ಎಚ್. ಸಿದ್ದಲಿಂಗ ಸ್ವಾಮಿ, ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪನಿ ಡಾಟಾ ಪ್ಯಾಟರ್ನ್ಸ್ ಮುಖ್ಯಸ್ಥ ಮತ್ತು ನಿರ್ದೇಶಕ ಶ್ರೀನಿವಾಸ ಗೋಪಾಲನ್ ರಂಗರಾಜನ್ ಮತ್ತು ರೇಖಾ ರಂಗರಾಜನ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಕಾರ್ಯಕ್ರಮದ ಸಂಯೋಜಕರಾದ ಸಚಿನ್ ಪ್ರಭು, ಶಿಲ್ಪಾ ಪ್ರಭು ಸುದ್ದಿಗೋಷ್ಠಿಯಲ್ಲಿದ್ದರು.
ಮಾ.23 ರಂದು ಬೆಳಗ್ಗೆ 10ರಿಂದ ಆಟೋ ಎಕ್ಸ್‌ಪೋ ದುಬಾರಿ ವಾಹನಗಳ ಪ್ರದರ್ಶನ ಮತ್ತು ಮದ್ಯಾಹ್ನ 3 ಗಂಟೆಗೆ ಹಳೇ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಸಂಜೆ 7ರಿಂದ ತಮರಕ್ಕೇರಿ ಚೂರಂ ತಂಡದವರಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ರತ್ನ ಕುಮಾರ್ ಮಾಹಿತಿ ನೀಡಿದರು.