ವಿದ್ಯಾರ್ಥಿಗಳಿಗೆ ಕ್ರೀಡಾ ಮನೋಭಾವ ಅವಶ್ಯಕ: ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ ಹೇಳಿಕೆ

Annual Games at Mims Mandya
Published on

ಮಂಡ್ಯ: ವೈದ್ಯ ವಿದ್ಯಾರ್ಥಿಗಳಲ್ಲೂ ಕ್ರೀಡಾಮನೋಭಾವ ಅತ್ಯವಶ್ಯಕ ಎಂದು ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ ಹೇಳಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಿಮ್ಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಆರೋಗ್ಯ ಹೆಚ್ಚಿಸುವ ವೈದ್ಯರು ಕೂಡ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ, ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಸಲಹೆ ನೀಡಿದರು.

ಕಾಲೇಜಿನಲ್ಲಿ 10 ದಿನಗಳಿಂದ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯುತ್ತಿವೆ. ಎಲ್ಲರೂ ಉತ್ಸುಕತೆಯಿಂದ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ. ಮನುಷ್ಯನಿಗೆ ಕ್ರೀಡೆ ಒಂದು ಅವಿಭಾಜ್ಯ ಅಂಗವಾಗಿ ಅರಿಯಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯ ತುಂಬ ಚೆನ್ನಾಗಿ ಇರುತ್ತದೆ ಎಂದರು.

ವೈದ್ಯಕೀಯ ಅಧೀಕ್ಷಕ ಡಾ.ಜಿ.ಶಿವಕುಮಾರ್, ಕ್ರೀಡಾ ಸಮಿತಿ ಸದಸ್ಯ ಡಾ.ಅಶ್ವಿನ್, ಡಾ.ಜಾಹ್ನವಿ, ಡಾ.ಎಸ್.ಎಂ.ಸುರೇಶ್ ಇತರರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net