

ಸಾಸ್ವೆಹಳ್ಳಿ: ಹೋಬಳಿಯ ಕ್ಯಾಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ 6.07 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಪಾಟೀಲ್ ಹೇಳಿದರು.
ಹೋಬಳಿ ವ್ಯಾಪ್ತಿಯ ಕ್ಯಾಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಶನಿವಾರ ನಡೆದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಸಂಘಗಳು ಲಾಭ ಗಳಿಸುವುದಕ್ಕಿಂತಲೂ ಸಂಘದ ಸದಸ್ಯರ ಅವಶ್ಯಕತೆಗಳಿಗೆ ಸ್ಪಂದಿಸಿ ಉತ್ತಮ ಸೇವೆ ನೀಡುವ ಗುರಿ ಹೊಂದಿದೆ ಎಂದರು.
ಸಂಘದ ನಿರ್ದೇಶಕ ಎಂ.ಕೆ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರಿ ಸಂಘಗಳು ಪ್ರಜಾಪ್ರಭುತ್ವ ತತ್ವಗಳಡಿ ಕೆಲಸ ಮಾಡುತ್ತಿದ್ದು ಗ್ರಾಮೀಣ ಆರ್ಥಿಕ ವ್ಯವಸ್ಥೆಗೆ ವರದಾನವಾಗಿವೆ ಎಂದರು.
ಸಂಘದ ಉಪಾಧ್ಯಕ್ಷ ಜಿ. ಮಂಜಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ನಿರ್ದೇಶಕರಾದ ದೊಡ್ಡೇಶ, ಕರಿಬಸಪ್ಪ, ಮಂಜಪ್ಪ, ಚಂದ್ರಪ್ಪ, ನಾಗರಾಜಪ್ಪ, ರಾಜಪ್ಪ, ಗಂಗಮ್ಮ, ಪಾರ್ವತಮ್ಮ, ಬಸಪ್ಪ, ಮತ್ತಿತರರಿದ್ದರು.