

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ&-ಆಪರೇಟಿವ್ ಸೊಸೈಟಿ 18,309 ಸದಸ್ಯರಿಂದ ರೂ. 4.77 ಕೋಟಿ ಪಾಲು ಬಂಡವಾಳ ಹಾಗೂ 509.35 ಕೋಟಿ ರೂ. ಠೇವಣಿ, ರೂ. 402.12 ಕೋಟಿ ಹೊರಬಾಕಿ ಸಾಲ ಹೊಂದಿದೆ. 2023&-24ನೇ ಸಾಲಿನಲ್ಲಿ 2.500 ಕೋಟಿ ರೂ. ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದ್ದು, 15.23 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯತನ ಪಾಲು ಏರಿಕೆ ಮಾಡಲಾಗಿದ್ದು, 1 ಸಾವಿರ ರೂ. ಪಾವತಿ ಮಾಡಿ ಸರ್ಟಿಫಿಕೇಟ್ ಪಡೆಯಬೇಕು. ಎಲ್ಲಾ ಸದಸ್ಯರು ಸಂದಲ್ಲಿ ಉಳಿತಾಯ ಖಾತೆ ತೆರೆಯಬೇಕು. ಇದರಿಂದ ಡಿವಿಡೆಂಟ್ ಮೊತ್ತ ಪಾವತಿ ಸುಲಭವಾಗಲಿದೆ. ಸದಸ್ಯರು 3 ವರ್ಷಕ್ಕಿಂತ ಹೆಚ್ಚು ಸಮಯ ಡಿವಿಡೆಂಟ್ ಪಡೆಯದಿದ್ದರೆ ಈ ಮೊತ್ತವನ್ನು ಕ್ಷೇಮನಿಧಿಗೆ ವರ್ಗಾಯಿಸಲಾಗುವುದು ಎಂದರು.
ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ರವರು ವಾರ್ಷಿಕ ವರದಿ, ಲೆಕ್ಕಪತ್ರಗಳನ್ನು ಮಂಡಿಸಿ, ಸುರಕ್ಷಿತ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಭದ್ರತಾಕ್ರಮ ಅನುಸರಿಸಿಕೊಂಡು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಿದ್ದು, ಸದಸ್ಯರು ಸೌಲಭ್ಯದ ಪ್ರಯೋಜನ ಪಡೆಯಬಹುದು. ಕೇವಲ ಬ್ಯಾಂಕಿಂಗ್ ವ್ಯವಹಾರವನ್ನು ಮಾತ್ರವಲ್ಲದೆ ವಾರ್ಷಿಕ ಸುಮಾರು 25 ಲಕ್ಷ ರೂ. ಶಿಕ್ಷಣ, ಆರೋಗ್ಯ, ಸಾಂಸತಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಯಿತು. ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ. ನಾಯಕ್, ಸದಾಶಿವ ನಾಯ್ಕ, ಮನೋಹರ್ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ಉಪಸ್ಥಿತರಿದ್ದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವಿಣ್ ಕುಮಾರ್ ವಂದಿಸಿದರು.