₹13.5 ಲಕ್ಷ ನಿವ್ವಳ ಲಾಭ

krushi sahakara sangh
ವಿಜಯಪುರದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸದಸ್ಯರ ವಾರ್ಷಿಕ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷ ಎಂ.ನಾರಾಯಣಸ್ವಾಮಿ, ನಿರ್ದೇಶಕರಾದ ವಿ.ಎಂ.ನಾಗರಾಜ್, ಎಸ್.ಶಿವಾನಂದ್, ಆರ್.ಮುನಿರಾಜು, ಬೈರಪ್ಪ, ಕೆ.ಮುನಿರಾಜು, ಎಂ.ರಾಜಣ್ಣ, ಮಂಜುಳಾ. ಸೌಭಾಗ್ಯಮ್ಮ ಇದ್ದರು.
Published on

*ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ

ವಿಜಯವಾಣಿ ಸುದ್ದಿಜಾಲ ವಿಜಯಪುರ
ಇಲ್ಲಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು 2,647 ಮಂದಿ ಸದಸ್ಯರನ್ನು ಹೊಂದಿದ್ದು, 1,10,62,044 ರೂಪಾಯಿ ಹೂಡಿಕೆಗಳಿವೆ. ಪ್ರಸಕ್ತ ಸಾಲಿನಲ್ಲಿ 13,50,328 ರೂ.ನಿವ್ವಳ ಲಾಭಗಳಿಸಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಂಸುಂದರ್ ಹೇಳಿದರು.
ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಸಂಘದ ಅಧ್ಯಕ್ಷ ಟಿ.ನಾಗರಾಜ್ ಮಾತನಾಡಿ, ಸಹಕಾರಿ ಸಂಘದಲ್ಲಿ ಪಡೆದ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಿ, ಪುನಃ ಸಾಲ ಪಡೆದುಕೊಳ್ಳುವ ಮೂಲಕ ಸಂಘವನ್ನು ಏಳಿಗೆಯತ್ತ ಮುನ್ನಡೆಸಿಕೊಂಡು ಹೋಗಲು ಸಹಕಾರ ನೀಡಬೇಕು. ರೈತರು, ಯಾವ ಉದ್ದೇಶಕ್ಕಾಗಿ ಸಾಲ ಪಡೆಯುತ್ತಾರೋ ಅದೇ ಉದ್ದೇಶಕ್ಕಾಗಿ ಸಾಲ ಬಳಕೆ ಮಾಡಿಕೊಳ್ಳಬೇಕು ಎಂದರು.
ನಂದಿನಿ ಶಾಲೆ ಕಾರ್ಯದರ್ಶಿ ಬಿ.ಚೇತನ್‌ಗೌಡ ಮಾತನಾಡಿ, ಸಹಕಾರಿ ಸಂಘಗಳು ಉತ್ತಮವಾಗಿ ಲಾಭಾಂಶಗಳಿಸಿಕೊಂಡು ಅಭಿವೃದ್ಧಿಯಾಗಬೇಕಾದರೆ, ಸಿಬ್ಬಂದಿ ಪ್ರಾಮಾಣಿಕವಾಗಿ ಬದ್ಧತೆಯಿಂದ ಕೆಲಸ ಮಾಡಬೇಕು. ಸಹಕಾರಿ ಬ್ಯಾಂಕುಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಮಾಡಬೇಕು. ರೈತರಿಗೆ ಚಿನ್ನದ ಮೇಲಿನ ಸಾಲವನ್ನು ನೀಡುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸಿ.ಪ್ರಕಾಶ್, ಎಂ.ಕೇಶವ್, ಸೀನಪ್ಪ, ನಟಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net