

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೆಸಿಸಿ ಬ್ಯಾಂಕ್ ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಆ. 24ರಂದು ಬ್ಯಾಂಕ್ ಪ್ರಧಾನ ಕಚೇರಿ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಎಸ್.ವಿ.ಹೂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಡಿ. ಮಲ್ಲಾಪುರ ತಿಳಿಸಿದ್ದಾರೆ.