

ಶನಿವಾರಸಂತೆ : ಶನಿವಾರಸಂತೆ ಶ್ರೀ ಬೀರಲಿಂಗೇಶ್ವರ ಪ್ರಬಲ ಭೈರವಿ ಮತ್ತು ಪರಿವಾರ ದೇವರುಗಳ 6ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಸೋಮವಾರ ಶ್ರದ್ದಾಭಕ್ತಿಯಿಂದ ನೆರವೇರಿತು.
ಸೋಮವಾರ ಮುಂಜಾನೆ 5.30ಕ್ಕೆ ಗಂಗೆಪೂಜೆ, ಗೋಪೂಜೆ, ಮಂಗಳಾರತಿ ನೆರವೇರಿಸಿದ ನಂತರ ಪಟ್ಟಣದ ಸಹಕಾರ ಬ್ಯಾಂಕ್ ಹತ್ತಿರದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ವರೆಗೆ ಕಳಸ ಕುಂಭ ಹೊತ್ತ ಮಹಿಳೆಯರು ಮತ್ತು ಮಕ್ಕಳು ಮೆರವಣಿಗೆಯಲ್ಲಿ ಸಾಗಿದರು.
ಮಹಾ ಸಂಕಲ್ಪ, ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು. ಬ್ರಹ್ಮ ದೇವರ ಗುಡಿಯಲ್ಲಿ ಮಹಾಪೂಜೆ ಮತ್ತು ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ಮಾಡಲಾಯಿತು. ಬಿದರೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶ್ರೀ ಬಸವೇಶ್ವರ ದೇವರಿಗೆ ಮಹಾ ಪೂಜೆ, ಮಹಾ ಮಂಗಳಾರತಿ ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.
ಹೆಮ್ಮನೆ ಗ್ರಾಮದಲ್ಲಿರುವ ಮಾರಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನಗಳಲ್ಲಿ ಮಹಾ ಪೂಜೆ, ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಬೀರಲಿಂಗೇಶ್ವರ ಪ್ರಬಲ ಭೈರವಿ ಸನ್ನಿಧಿಯಲ್ಲಿ ಸಂಜೆ ವಿಶೇಷ ಪೂಜೆ ಮಾಡಲಾಯಿತು. ದೀಪಾರಾಧನೆ, ಗಣಪತಿ ಪೂಜೆ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ನವಗ್ರಹ ಹಾಗೂ ಮೃತುತುಂಜಯ ಪೂಜೆ ಮತ್ತು ಹೋಮ, ಗಣಪತಿ ಹೋಮ, ಧನ್ವಂತರಿ ಹೋಮ, ಮೂಲ ದೇವರಿಗೆ ಫಲ ಪಂಚಾಮೃತ ಅಭಿಷೇಕ, ಏಕವಾರು ರುದ್ರಾಭಿಷೇಕ, ಮಹಾಬಲಿ, ಮಹಾಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರೋಕ್ಷಣೆಯೊಂದಿಗೆ ಪರಿವಾರ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು.